ಬೆಂಗಳೂರು;ಕರಾವಳಿ ಭಾಗದಲ್ಲಿ ನಿಸರ್ಗ ಚಂಡಮಾರುತದ ಎಫೆಕ್ಟ್ಅರಬ್ಬಿ ಸಮುದ್ರದಲ್ಲಿ ಭಾರಿ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಂಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

ಅಲ್ಲದೆ, ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಎನ್ ಡಿಆರ್ ಎಫ್ ತಂಡವೊಂದು ಮಂಗಳೂರಿಗೆ ತಲುಪಿದೆ.!