ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರು ಮಾತನಾಡಿ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ನಟ ದಿ.ಅಂಬರೀಶ್ ಅವರ ಪತ್ನಿ, ನಟಿ ಸುಮಲತಾ ಅವರು ಖಚಿತವಾಗಿ ಗೆಲುವು ಸಾಧಿಸುತ್ತಾರೆ ಎಂದು ಭವಿಷ್ಯ ಹೇಳಿದ್ದಾರೆ.

ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತಿರುವುದು ಬಹುದೊಡ್ಡ ತಪ್ಪು. ಹಾಗಾಗಿ ಈ ಚುನಾವಣೆಯಲ್ಲಿ ಜನರೇ ಹೆಚ್.ಡಿ.ದೇವೇಗೌಡ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಉತ್ತರಿಸಲಿದ್ದಾರೆ. ಅಂತ ಹೇಳುವುದರ ಜೊತೆಗೆ  ಸದ್ಯ ರಾಜಕೀಯ ವ್ಯಕ್ತಿಗಳ ಬಗ್ಗೆ ಜನರಿಗೆ ಭಯಂಕರ ಜಿಗುಪ್ಸೆ ಬಂದುಬಿಟ್ಟಿದೆ ಮಾರಾಯ ಅಂತ ಹೇಳಿದ್ರು.