ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮಕ್ಕೆ ಪ್ರಚಾರಕ್ಕೆಂದು ಬಂದಿದ್ದ ವೇಳೆ ಜೆಡಿಎಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಈ ವೇಳೆ, ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆ ಎಂದು ಹೇಳುತ್ತಾರೆ. ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರೇ ಇದ್ದು, ಜಿಲ್ಲೆಯ ಮೂವರು ಜನಪ್ರತಿನಿಧಿಗಳು ಸಚಿವರಾಗಿದ್ದಾರೆ. ಹೀಗಿದ್ದರೂ ಕೂಡ ಜಿಲ್ಲೆಯ ಅಭಿವೃದ್ಧಿಗೆ ಹಾಸನ ಜಿಲ್ಲೆಯವರೇ ಬೇಕಂತೆ ಎಂದು ವ್ಯಂಗ್ಯವಾಡಿದ್ದಾರೆ.!