ಮಂಡ್ಯ: ರಾಜಕೀಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜನರ ಬೆಂಬಲವನ್ನು ಪಡೆಯುವಲ್ಲಿ ಮುಂದಾಗಿದ್ದಾರೆ. ಹೇಗಾದರೂ ಮಾಡಿ ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ಲ ಬೇಕೆಂಬ ಹಟದಿಂದ ನಿನ್ನೆ  ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಿನ್ನೆ ರಾತ್ರಿ ಭೇಟಿ ಮಾಡಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರು ಶಕ್ತಿ ವೃದ್ಧಿಸಿಕೊಳ್ಳುತ್ತಿದ್ದು, ಇದು ನಿಖಿಲ್ ಕುಮಾರಸ್ವಾಮಿಗೆ ಆತಂಕ ತಂದಿದೆ. ಹಾಗಾಗಿ ನಿಖಿಲ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ.

ಸಿದ್ದರಾಮಯ್ಯ ಅವರು ನಿಖಿಲ್ ಪರ ಪ್ರಚಾರ ಮಾಡಲು ಒಪ್ಪಿಕೊಂಡಿದ್ದು, ಸೋಮವಾರ ಅಥವಾ ಮಂಗಳವಾರ ಮಂಡ್ಯ, ಹಾಸನ, ಮೈಸೂರುಗಳಲ್ಲಿ ಪ್ರಚಾರ ನಡೆಸಲಿದ್ದಾರೆ.