ಚಿಕ್ಕಮಗಳೂರು:ಸಾಲ ಬಾಧೆಯಿಂದ ಪಾಂಡವಪುರ ತಾಲೂಕಿನ ಸುಂಕಾತಣ್ಣೂರು ಗ್ರಾಮದ ಒಂದೇ ಕುಟುಂಬದ ನಾಲ್ವರು ವಿಷ ಕುಡಿದು ಸಾವನ್ನಪಿರುವ ಘಟನೆಗೆ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ವಿಷಾದ ವ್ಯಕ್ತಪಡಿಸಿದ್ದಾರೆ.

ಸಿಎಂ ಅವರಿಗೆ ರೈತ ಕುಟುಂಬ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಮಾಹಿತಿ ಪಡೆದು ಮಾಧ್ಯಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ನಂದೀಶ್ ವೈಯಕ್ತಿಕ ವಿಷ್ಯಕ್ಕೆ ಆತ್ಮಹತ್ಯೆ ಮಾಡ್ಕೊಂಡಿದ್ದಾರೆ. 15 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಹೀಗಾಗಿ ತಾಳ್ಮೆಯಿಂದ ಇರುವಂತೆ ಸೂಚಿಸಿದ್ದೆ. ಆದರೆ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎಂದು ಶೃಂಗೇರಿಯಲ್ಲಿ ವಿಷಾದ ವ್ಯಕ್ತಪಡಿಸಿದರು.