ಮಂಡ್ಯ : ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮುಖ್ಯ ಮಂತ್ರಿ ಕುಮಾರಸ್ವಾಮಿ ಪುತ್ರ ಮತ್ತೊಂದು ಸಂಕಟ ಶುರುವಾಗಿದೆ.

ನಿಖಿಲ್.ಕೆ ಅವರ ನಾಮಪತ್ರ ತಿರಸ್ಕರಿಸುವಂತೆ ಬಿ.ಎಸ್.ಗೌಡ ಎಂಬುವವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ದೂರಿನಲ್ಲಿ ನಾಮಪತ್ರದಲ್ಲಿ ನಿಖಿಲ್.ಕೆ ಎಂದಿದ್ದು, ಮತದಾನದ ಗುರುತಿನ ಚೀಟಿಯಲ್ಲಿ ನಿಖಿಲ್ ಕುಮಾರಸ್ವಾಮಿ ಎಂದಿದೆ. ಹಾಗಾಗಿ ಹೆಸರಿನಲ್ಲಿ ವ್ಯತ್ಯಾಸವಿದ್ದು, ತಪ್ಪಾಗಿ ಸಲ್ಲಿಸಿರುವ ನಾಮಪತ್ರವನ್ನು ತಿರಸ್ಕರಿಸುವಂತೆ ಮನವಿ ಮಾಡಿದ್ದಾರೆ. ನ್ಯಾಯ ಸಿಗದಿದ್ದಲ್ಲಿ ಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ.