ಬೆಂಗಳೂರು: ನಟ ದಿ.ಅಂಬರೀಶ್ ಅವರ ಪತ್ನಿ ಸುಮಲತಾ ಅವರನ್ನು ಭೇಟಿ ಮಾಡಿದ ನಟರುಗಳಾದ ದರ್ಶನ್, ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ ಸೇರಿ ಮಂಡ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.

ಅಂಬರೀಶ್ ಅವರು ಮಂಡ್ಯ ಜನತೆ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು. ಅವರ ಹೆಸರನ್ನು ನೀವು ಉಳಿಸಲೇಬೇಕು. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ. ಕಾಂಗ್ರೆಸ್ ಅಥವ ಜೆಡಿಎಸ್ ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸಿ. ಇಡೀ ಚಿತ್ರರಂಗ ನಿಮ್ಮ ಬೆಂಬಲಕ್ಕೆ ಇದೆ ಎಂದು ಹೇಳಿದ್ದಾರೆ.