ನವದೆಹಲಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಜೊತೆಗೆ ಬೆಳಗಿನ ಉಪಾಹಾರವನ್ನೂ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಮಕ್ಕಳಿಗೆ ಬೆಳಗಿನ ಹೊತ್ತು ಪೌಷ್ಟಿಕಯುಕ್ತ ತಿಂಡಿ ಸೇವನೆಗೆ ಸಿಕ್ಕಿರೇ ನಂತರ ಇಡೀ ದಿನ ಮಕ್ಕಳು ಕಲಿಕೆಯಲ್ಲಿ ಏಕಾಗ್ರತೆ ಸಾಧಿಸಲು, ಹೆಚ್ಚು ಚಟುವಟಿಕೆಯಿಂದ ಇರಲು ಸಹಕಾರಿಯಾಗುತ್ತದೆ.

ಹೀಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೆಳಗಿನ ತಿಂಡಿಯನ್ನು ಕೂಡ ಸೇರಿಸಲು ಸರಕಾರ ಚಿಂತನೆ ನಡೆಸಿದೆ. ಮಕ್ಕಳ ಪೋಷಣೆ ಮತ್ತು ಆರೋಗ್ಯಕ್ಕೆ ಒತ್ತು ನೀಡಲು ಮುಂದಾಗಿದ್ದು ಬೆಳಗಿನ ಉಪಾಹಾರದಿಂದ ಮಕ್ಕಳ ಅರಿವು ಮತ್ತು ಕಲಿಕೆ ಸಾಮರ್ಥ್ಯ ಹೆಚ್ಚಾಗುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ.