ಬೆಂಗಳೂರು: ತರಾತುರಿಯಲ್ಲಿ ಶಾಲೆಗಳನ್ನು ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದ ಶಾಲಾ ಮಕ್ಕಳ ಪೋಷಕರಿಗೆ ಒಂದು ಮಾಹಿತಿ. ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ಮಾಧ್ಯಮಗಳಲ್ಲಿ ಬರುತ್ತಿರುವ ಕೆಲ ಮಾಹಿತಿಗಳು ಅಧಿಕೃತವಲ್ಲ. ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.