ರಾಮನಗರ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಸಿಎಂ ಆಗುವ ದಿನ ಬರುತ್ತದೆ ಎಂದು ನಂಜಾವಧೂತ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ದೊಡ್ಡಮಳೂರಿನಲ್ಲಿ ನಡೆದ ಬಮೂಲ್ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುವ ಮುಖ್ಯಮಂತ್ರಿ ಯಾರಾದರೂ ಇದ್ದರೆ ಅದು ಕುಮಾರಸ್ವಾಮಿ ಮಾತ್ರ ಎಂದು ಹೇಳಿದರು.

ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ, ಅವರು ಮಾಡಿದ ಕೆಲಸ ಕಾರ್ಯಗಳು ಸರಿಯಾಗಿ ಪ್ರಚಾರವಾಗಲಿಲ್ಲ. ಈಗ ರಾಜ್ಯದಲ್ಲಿ ಯಡಿಯೂರಪ್ಪನವರು ಸಿಎಂ ಆಗಿದ್ದಾರೆ. ಅವರೂ ಕೂಡ ಒಳ್ಳೆಯ ಕೆಲಸಗಳನ್ನ ಮಾಡಬೇಕಿದೆ ಎಂದು ಹೇಳಿ ಬಿಟ್ರು ಸ್ವಾಮೀಜಿ.!