ಮೈಸೂರು: ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾದರೆ ನಾನು ರಾಜಕೀಯ ಬಿಟ್ಟು ಹೋಗುತ್ತೇನೆ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ 6, 7 ಮತ್ತು 8 ಅದೃಷ್ಟದ ಸಂಖ್ಯೆಗಳು. ಬೇಕಾದರೆ ಇದನ್ನು ಡೈರಿಯಲ್ಲಿ ಬರೆದು ಇಟ್ಕೊಳ್ಳಿ. 18 ಲಕ್ಕಿ ನಂಬರ್. ಹೀಗಾಗಿ ಮೊದಲ ಹಂತದ ಚುನಾವಣೆಯಲ್ಲಿ ನಮ್ಮ 14 ಅಭ್ಯರ್ಥಿಗಳೇ ಗೆಲ್ಲುತ್ತಾರೆ. ಮೋದಿ ಮತ್ತೆ ಪ್ರಧಾನಿಯಾದರೆ ನಾನು ರಾಜಕೀಯ ಬಿಟ್ಟು ಹೋಗ್ತೀನಿ ಎಂದು ಹೇಳಿದರು,

ಮೈತ್ರಿ ಅಭ್ಯರ್ಥಿಗಳು 22 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುತ್ತಾರೆ ಎಂಬ ವಿಶ್ವಾಸದ ಮಾತುಗಳನ್ನು ಹೇಳಿದರು.