ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ ಜನತೆ ಆತಂಕ ಪಡುವ ಅಗತ್ಯವಿಲ್ಲ, ಹಾಗೆಯೇ ಬೆಂಗಳೂರು ತೊರೆಯಬೇಡಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜನತೆಗೆ ಮನವಿ ಮಾಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಆತಂಕ ಹಾಗೂ ಲಾಕ್ ಡೌನ್ ಭೀತಿ ಯಿಂದ ನಗರವನ್ನು ಬಿಟ್ಟು ತಮ್ಮ ಊರುಗಳ ಕಡೆ ಮುಖ ಮಾಡಿದ್ದಾರೆ. ಇದರಿಂದ ಜಿಲ್ಲೆಗಳಿಗೆ ಹಾಗೂ ಹಳ್ಳಿಗಳಲ್ಲಿ ಸೋಂಕಿನ ಭೀತಿ ಹೆಚ್ಚಾಗುತ್ತಿದೆ. ಹೀಗಾಗಿ ಜನರು ದಯವಿಟ್ಟು ಬೆಂಗಳೂರಿನಲ್ಲಿ ಸುರಕ್ಷತೆಯಿಂದ ಇರಿ. ಸರ್ಕಾರ ಲಾಕ್ಡೌನ್ ಮಾಡುವುದಿಲ್ಲ. ಲಾಕ್ಡೌನ್ ಆಗುತ್ತದೆ ಎಂಬ ಭಯ ಪಡಬೇಡಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿರ್ಣಯದಂತೆ ಪ್ರತಿ ಭಾನುವಾರ ಹಾಗೂ ಒಟ್ಟು ನಾಲ್ಕು ಭಾನುವಾರ ಲಾಕ್ಡೌನ್ ಮಾಡಲು ನಿರ್ಧಾರ ಮಾಡಲಾಗಿತ್ತು. ಇಂದಿನ ಲಾಕ್ಡೌನ್ ಪ್ರಾರಂಭದಲ್ಲಿ ಯಶಸ್ವಿ ಆಗಿದೆ. ಜನರು ಸ್ವಯಂ ಪ್ರೇರಿತರಾಗಿ ಕರ್ಪ್ಯೂಗೆ ಬೆಂಬಲ ಕೊಟ್ಟು ಸ್ವಯಂ ಲಾಕ್ ಆಗಿದ್ದಾರೆ. ನಗರದಲ್ಲಿ ವಾಹನ ಸಂಚಾರ ವಿರಳವಾಗಿದೆ. ಜನರೂ ಕೂಡಾ ಅನಗತ್ಯವಾಗಿ ಹೊರಗಡೆ ಬಂದಿಲ್ಲ. ಇನ್ನೂ ಸಂಜೆವರಗೆ ಎಲ್ಲರೂ ಕಟ್ಟುನಿಟ್ಟಿನ ಲಾಕ್ಡೌನ್ ನಿಯಮಾವಳಿ ಪಾಲನೆ ಮಾಡಬೇಕು. ಜನರೇ ಸ್ವಯಂ ನಿಯಂತ್ರಣ ಹಾಕಿಕೊಳ್ಳಿ ಎಂದು ಹೇಳಿದರು.
No comments!
There are no comments yet, but you can be first to comment this article.