ಬೆಂಗಳೂರು: ಮಧುಮೇಹದಿಂದ ಬಳಲುತ್ತಿರುವವರಿಗೆ ಕೊರೋನಾ ಸೋಂಕು ತಗುಲಿದರೆ ಅಪಾಯದ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮಧುಮೇಹ ಇರುವವರಿಗೆ ಕೊರೋನಾ ಸೋಂಕು ತಗುಲಿದರೆ ಅಪಾಯದ ಸಾಧ್ಯತೆ ಶೇ. 50 ರಷ್ಟು ಇರುತ್ತದೆ. ಇದರಿಂದ ಹೊರಬರಲು ಮಧುಮೇಹ ಇರುವವರು ಮನೆಯಲ್ಲಿ ಮಿತ ಆಹಾರ ಸೇವನೆ ಮತ್ತು ನಿಯಮಿತ ವ್ಯಾಯಾಮಗಳನ್ನು ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.