ನವದೆಹಲಿ : ವಯೋ ಸಹಜ ಖಾಯಿಲೆಯಿಂದ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ, ಮಧ್ಯಪ್ರದೇಶದ ರಾಜ್ಯಪಾಲ ಲಾಲ್ಜಿ ಟಂಡನ್ ಅವರು ಮಂಗಳವಾರ (ಜುಲೈ 21) ಉತ್ತರ ಪ್ರದೇಶದ ಲಖನೌದಲ್ಲಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಲಾಲ್ಜಿ ಟಂಡನ್ ಅವರ ಪುತ್ರ ಅಶುತೋಷ್ ಟಂಡನ್ ಈ ಸುದ್ದಿಯನ್ನು ಟ್ವಿಟ್ಟರ್ ನಲ್ಲಿ ದೃಡಪಡಿಸಿದ್ದಾರೆ. ಟಂಡನ್ ಅವರನ್ನು ಉಸಿರಾಟದ ತೊಂದರೆ ಮತ್ತು ಜ್ವರದಿಂದ ಲಕ್ನೋದ ಖಾಸಗಿ ಆಸ್ಪತ್ರೆಗೆ ದಾಖಲಿಗಿದ್ದರು.

ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಟಂಡನ್ ಅವರ ಅನಾರೋಗ್ಯದ ನಂತರ ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರಿಗೆ ಮಧ್ಯಪ್ರದೇಶದ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ. ರಾಜ್ಯಪಾಲ ಲಾಲ್ಜಿ ಟಂಡನ್ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.