ಬೆಂಗಳೂರು : ಹೌದ ಹೀಗೊಂದು ಸುದ್ದಿ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ. ಲಾಕ್ ಡೌನಿಂದ ಮನೆಯಲ್ಲೇ ಉಳಿದಿರುವ ಶಾಲಾ ಮಕ್ಕಳಿಗೆ ರಾಜ್ಯಸರ್ಕಾರ, ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕಗಳನ್ನು ಮನೆಗೆ ಪೂರೈಕೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆಯಂತೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸದ್ಯ ಶಾಲಾ-ಕಾಲೇಜುಗಳನ್ನು ಆರಂಭಿಸಿಲ್ಲ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಜುಲೈನಲ್ಲೂ ಶಾಲಾ-ಕಾಲೇಜು ಆರಂಭವಾಗಲ್ಲ ಎನ್ನಲಾಗಿದೆ. ಹೀಗಾಗಿ ಸೆಪ್ಟೆಂಬರ್ ವರೆಗೂ ಶಾಲೆ ಆರಂಭಿಸುವ ಸಾಧ್ಯತೆ ಕಡಿಮೆ. ಆದರೆ, ಮಕ್ಕಳು ಅಲ್ಲಿಯವರೆಗೆ ಮನೆಯಲ್ಲಿಯಾದರ ಓದಿಕೊಳ್ಳಲಿ ಎಂಬ ಕಾರಣಕ್ಕೆ ಪುಸ್ತಕಗಳನ್ನು ಮನೆಗೆ ತಲುಪಿಸಲಾಗುತ್ತದೆಯಂತೆ.

ಮನೆಯಲ್ಲೇ ಇರುವ ಮಕ್ಕಳಿಗೆ ಪಠ್ಯಪುಸ್ತಕ ನೀಡುವ ಮೂಲಕ ಓದು ಬರಹದ ಕಡೆ ಗಮನ ಹರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಪಠ್ಯಪುಸ್ತಕಗಳ ಪೂರೈಕೆಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದು ಸುದ್ದಿ.!