ಬೆಂಗಳೂರು: ಮಳೆಗಾಲ ಕಳೆದು ಮೈಕೊರೆಯುವ ಮಾಗಿಯ ಚಳಿ ಎಲ್ಲೆಡೆ ಆರಂಭವಾಗಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸರಾಸರಿ ಉಷ್ಣಾಂಶ 6 ರಿಂದ 10 ಡಿಗ್ರಿ ಸೆಲ್ಸಿಯಸ್ ಕುಸಿತವಾಗಿದೆ.

 ಕಲಬುರಗಿ, ರಾಯಚೂರು, ಬೀದರ್, ಯಾದಗಿರಿ, ವಿಜಯಪುರ, ಧಾರವಾಡ, ಗದಗ, ಹಾವೇರಿ ಮತ್ತು ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನವು ಈ ವಾರ 10 ಡಿಗ್ರಿ ಸೆಲ್ಸಿಯಸ್ ಗೆ ಇಳಿಕೆಯಾಗಲಿದ್ದು, ಚಳಿಯ ತೀವ್ರತೆ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.!