ಮಹಾರಾಷ್ಟ್ರ; ಮಹಾರಾಷ್ಟ್ರದಲ್ಲಿ ಅತಂತ್ರ ರಾಜಕೀಯ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರವು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಮಂಗಳವಾರ ಸಂಜೆ ಜಾರಿಗೊಳಿಸಿದೆ.

ರಾಜ್ಯಪಾಲರ ಶಿಫಾರಸಿನ ನಂತರ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಒಪ್ಪಿಗೆ ನೀಡಲಾಗಿತ್ತು. ರಾಜ್ಯಪಾಲರ ವರದಿಯನ್ನು ರಾಷ್ಟ್ರಪತಿ ಕಚೇರಿಗೆ ಕಳುಹಿಸಲಾಗಿತ್ತು, ಅದಕ್ಕೆ ರಾಷ್ಟ್ರಪತಿ ಅವರು ಅಂಕಿತ ಹಾಕಿದ್ದಾರೆ.!