ನವದೆಹಲಿ: ನಾಳೆ ಸಂಜೆ 5 ಗಂಟೆಯೊಳಗಾಗಿ ಬಹುಮತ ಸಾಬೀತುಪಡಿಸಲು ಸುಪ್ರೀಂ ಆದೇಶ ನೀಡಿದೆ.

ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಗೆ ನಾಳೆ ಸಂಜೆ 5 ಗಂಟೆಯೊಳಗಾಗಿ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ.

ಫಡ್ನವಿಸ್ ಗೆ ಸರ್ಕಾರ ರಚಿಸಲು ಆಹ್ವಾನಿಸುವ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಶಿವಸೇನೆ-ಎನ್ ಸಿಪಿ-ಕಾಂಗ್ರೆಸ್ ಜಂಟಿಯಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಿನ್ನೆ ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದ್ದು, ಬಹುಮತ ಸಾಬೀತು ಆದ ಬಳಿಕ ಪ್ರಮಾಣವಚನ ಸ್ವೀಕರಿಸುವಂತೆ ಆದೇಶಿಸಿದೆ.!