ಬೆಂಗಳೂರು: ಮಾಜಿ ಭೂಗತ ದೊರೆ ಹಾಗೂ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ, ಮುತ್ತಪ್ಪ ರೈ ನಿಧನರಾಗಿದ್ದಾರೆ.

ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 2.30 ಕ್ಕೆ ಮೃತಪಟ್ಟಿದ್ದಾರೆ.

ಕೊರೋನಾ ಇರುವ ಹಿನ್ನೆಲೆಯಲ್ಲಿ ಬೇರೆ ಯಾರಿಗೂ ಅವಕಾಶ ಇರುವುದಿಲ್ಲ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಬಳಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಬಿಡದಿಯಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದ್ದು ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ. !