ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ನಲ್ಲಿರುವ ಸಮಸ್ಯೆಗೂ ಸಿದ್ದರಾಮಯ್ಯರಿಗೂ ಯಾವುದೇ ಸಂಬಂಧವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ರು.

ಕೆಎಲ್‍ಎಸ್ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರ ಜತೆಗೆ ಈ ಬಗ್ಗೆ ಮಾತುಕತೆ ನಡೆಸುವುದಿಲ್ಲ ದೋಸ್ತಿ ಸರ್ಕಾರ ಐದು ವರ್ಷ ಪೂರೈಸಲಿದೆ ಎಂದರು.

ಸಚಿವ ಡಿ.ಕೆ.ಶಿವಕುಮಾರ್ ಅವರು ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ರು.