ಚಿತ್ರದುರ್ಗ:ಧೀರ್ಘ ಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ.ಮಂಜುನಾಥ್ ಇನ್ನಿಲ್ಲ.

ಹಿರಿಯೂರಿನ ತೋಟದ ಮನೆಯಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದರು. ಅವರು ಆರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ತಟಸ್ಥರಾಗಿದ್ದರು.

ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆ, ಬೆಂಗಳೂರು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ರು. ಅವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗು ಮೊಮ್ಮಕ್ಕಳನ್ನಗಲಿದ್ದಾರೆ.

ಶೈಕ್ಷಣಿಕ ಅರ್ಹತೆ ಬಿ.ಎಸ್ಸಿ, ಬಿ.ಎಲ್. 1959 ರಲ್ಲಿ ತಾಲ್ಲೂಕು ಮಂಡಳಿ ಚುನಾವಣೆಯಲ್ಲಿ ಸ್ಪರ್ಧಿಸಿ ಮೈಸೂರು ರಾಜ್ಯದ ಯುವ ರೈತರ ಸಂಘದ ಸದಸ್ಯರಾದರು ಮತ್ತು ಹಲವಾರು ವರ್ಷಗಳ ಕಾಲ ಕೆಲಸ ಮಾಡಿದರು.

ಚಿತ್ರದುರ್ಗದಲ್ಲಿ ಹಲವಾರು ಹಾಸ್ಟೆಲ್ ಸಮಿತಿಯ ಸದಸ್ಯರಾಗಿದ್ದರು.

ಚಳ್ಳಕೆರೆ ತಾಲ್ಲೂಕಿನ ಶ್ರೀ ಬಸವೇಶ್ವರ ಸಹಕಾರ ಕೃಷಿ ಸೊಸೈಟಿಯ ಸ್ಥಾಪಕ ಅಧ್ಯಕ್ಷರಾಗಿದ್ದರು.

ನಾಲ್ಕನೇ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ (1967) ಹಿರಿಯೂರು ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು.

ವಿಧಾನಸಭೆಯ ಉಪ ಸ್ಪೀಕರ್ ಆಗಿದ್ದರು‌.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ಮೈಸೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿದ್ದರು. 1977 ರಲ್ಲಿ ಜನತಾ ಪಕ್ಷಕ್ಕೆ ಸೇರಿದ ಅವರು. ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಜನತಾ ಪಕ್ಷದ ಅಧ್ಯಕ್ಷರಾಗಿ 3 ವರ್ಷ ಕೆಲಸ ಮಾಡಿದ್ದರು.

ಮಾರ್ಚ್, 1983 ರಲ್ಲಿ ಶಾಸಕಾಂಗ ಪರಿಷತ್ತಿನ ಸದಸ್ಯರಾಗಿ ನಾಮ ನಿರ್ದೇಶನ, 1984 ರ ಆಗಸ್ಟ್ 18 ರಿಂದ ಯೋಜನಾ, ಸಂಸ್ಥೆಗಳ ಸಚಿವರಾಗಿ ನೇಮಕಗೊಂಡಿದ್ದರು. ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.