ಮೈಸೂರು: ಮಾಜಿ ಸಚಿವ ತನ್ವೀರ್ ಸೇಠ್ ಮೇಲೆ ಭಾನುವಾರ ರಾತ್ರಿ ಯುವಕನೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿದೆ.

ಕತ್ತಿಯಿಂದ ತನ್ವೀರ್ ಸೇಠ್ ಅವರ ಕುತ್ತಿಗೆ ಭಾಗಕ್ಕೆ ಭೀಕರ ಹಲ್ಲೆ ನಡೆಸಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ಮಾಡಿದ ಯುವಕನನ್ನು ಫರ್ಹಾನ್ ಪಾಷಾ (24) ಎಂದು ಗುರುತಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಬರಬೇಕಿದೆ.