ಬೆ0ಗಳೂರು: ಮಾರ್ಚ್ ತಿಂಗಳಲ್ಲಿ 2021-22 ನೆ ಸಾಲಿನ ರಾಜ್ಯ ಬಿಜೆಟ್ ಮಂಡಿಸಲು ಅಧಿವೇಶನ ಕರೆಯಲಾಗುವುದು. ಈ ಬಾರಿ ರೈತಪರ ಹಾಗೂ ಅಭಿವೃದ್ಧಿ ಪರ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಜನವರಿ ಮಾಸಾಂತ್ಯಕ್ಕೆ ಉಭಯ ಸದನಗಳ ಜಂಟಿ ಅಧಿವೇಶನವನ್ನು ಕರೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜನವರಿ ತಿಂಗಳ ಅಂತ್ಯದ ವೇಳೆಗೆ ವಿಧಾನಸಭೆ ಅಧಿವೇಶನ ಕರೆಯಲಾಗುವುದು ಎಂದು ಹೇಳಿದರು.

ನಮ್ಮ ರಾಜ್ಯವನ್ನು ಅಭಿವೃದ್ಧಿಯ ಸೂಚ್ಯಂಕದಲ್ಲಿ ಇಡೀ ದೇಶದಲ್ಲಿ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯುವುದು ನಮ್ಮ ಗುರಿಯಾಗಿದೆ. ಯಾರು ಏನೇ ಆರೋಪಗಳನ್ನು ಮಾಡಲಿ ನಾವು ಮಾತ್ರ ಅಭಿವೃದ್ಧಿಯ ಮಂತ್ರವನ್ನು ಜಪಿಸುತ್ತಾ, ಮುಂದುವರಿಯುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದರು.