ಬೆಂಗಳೂರು: ಮಾರ್ಚ್ 5 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಫೆ.17ರಿಂದ 31ರವರಗೆ ವಿಧಾನಮಂಡಲದ ಅಧಿವೇಶನ ನಡೆಯಲಿದೆ. ಮಾ. 2 ಮತ್ತು 3ರಂದು ಸಂವಿಧಾನದ ಕುರಿತು ಚರ್ಚೆ ಆಗಲಿದೆ.

ಮಾರ್ಚ್ 5 ರಂದು ಬಜೆಟ್ ಮಂಡನೆ ಆಗಲಿದೆ ಎಂದು ಹೇಳಿದ್ದಾರೆ. ಅಧಿವೇಶನದಲ್ಲಿ 6 ಮಸೂದೆ ಮಂಡನೆ ಆಗಲಿವೆ. ಎಲ್ಲಾ ಸದಸ್ಯರು ಅಧಿವೇಶನದ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.