ಬೆಂಗಳೂರು : ರಾಜ್ಯ ಸರ್ಕಾರವು ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಂಡಿದ್ದು, ಮಾಸ್ಕ್ ಧರಿಸದಿದ್ದರೆ 1 ಸಾವಿರ ರೂ. ದಂಡ ವಿಧಿಸಲು ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು ಮಾಸ್ಕ್ ಧರಿಸದೇ ಇರುವವರಿಗೆ ದಂಡವನ್ನು 200 ರೂ. ನಿಂದ 1000 ರೂ. ಗೆ ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಮತ್ತಷ್ಟು ಬಿಗಿ ಕ್ರಮವನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಮಾಸ್ಕ್ ಧರಿಸೋದು ಕಡ್ಡಾಯ ನಿಯಮವನ್ನು ಬಿಗಿಗೊಳಿಸಿದ್ದು, ಮಾಸ್ಕ್ ಧರಿಸದೇ ನಗರ ಪ್ರದೇಶಗಳಲ್ಲಿ ಓಡಾಡಿದ್ರೆ ಅಂತವರಿಗೆ 1000 ರೂ. ದಂಡ ವಿಧಿಸಲು ನಿರ್ಧರಿಸಿದೆ.