ಬಳ್ಳಾರಿ : ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ಕೇಂದ್ರ ಚುನಾವಣಾ ಆಯೋಗವು ಮಾ. 13 ರಂದು ನೀಡುವ ಸಾಧ್ಯತೆ ಇದ್ದು, ಮಾ. 15 ರಂದು ಬಸವನ ಬಾಗೇವಾಡಿಯಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ಪಕ್ಷದ ಅಧ್ಯಕ್ಷೆ ಅನುಪಮಾ ಶೆಣೈ ಹೇಳಿದ್ದಾರೆ.

ಚುನಾವಣಾ ಆಯೋಗಕ್ಕೆ ಪೆನ್ನು, ತೆಂಗಿನಕಾಯಿ, ಮೆಣಸಿನಕಾಯಿ, ದೋಣಿ ಮತ್ತು ಮನುಷ್ಯ ಸೇರಿದಂತೆ 10 ಗುರುತುಗಳನ್ನು ಕಳುಹಿಸಲಾಗಿದೆ. ಇದರಲ್ಲಿ ಯಾವುದನ್ನು ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಚುನಾವಣೆಯಲ್ಲಿ ತಾವು ಕಾಪು ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

ಜನರ ಹಿತವನ್ನು ಕಾಯಲು ಪಕ್ಷವನ್ನು ಹುಟ್ಟುಹಾಕಿದ್ದು, ರಾಜ್ಯದಲ್ಲಿ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ಅನುಪಮಾ ಶೆಣೈ ಹೇಳಿದರು.