ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ಯನ್ನು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿ. ಸಂಸ್ಥೆ ವತಿಯಿಂದ ರಾಜ್ಯದ ಆರು ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುತ್ತಿದೆ.

ಚಿಕ್ಕಬಳ್ಳಾಪುರ, ಹಾಸನ, ಹಾವೇರಿ, ಮಂಡ್ಯ, ಶಿವಮೊಗ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗುತ್ತಿದ್ದು, ಇಳುವರಿ ಆಧಾರಿತ ಬೆಳೆ ವಿಮಾ ಯೋಜನೆಯಾಗಿರುವ ಇದರಲ್ಲಿ ಒಟ್ಟು 34 ಮುಂಗಾರು ಬೆಳೆಗಳು ಒಳಗೊಳ್ಳಲಿದೆ. ಹೆಚ್ಚಿನ ಮಾಹಿತಿಗೆ 18004250505 ಗೆ ಸಂಪರ್ಕಿಸಬಹುದು