ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಬಿರುಸುಗೊಂಡಿದೆ. ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 27 ರಿಂದ 29 ರವರೆಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ಕರಾವಳಿಯಲ್ಲಿ ಗಂಟೆಗೆ 40 -50 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.