ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‍ನೊಂದಿಗಿನ ಮೈತ್ರಿ ಮುಂದುವರೆಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉಭಯ ಪಕ್ಷಗಳ ನಡುವೆ ಟಿಕೆಟ್ ಹಂಚಿಕೆಯನ್ನು ಅಂತಿಮಗೋಳಿಸಲಾಗುತ್ತದೆ ಎಂದು ಹೇಳಿದರು.