ಬಂಟ್ವಾಳ : ಗ್ರಾಮಪಂಚಾಯತ್ ಮಟ್ಟದಲ್ಲಿಯೇ ಜಾತಿ, ಆದಾಯ ಪ್ರಮಾಣ ಪತ್ರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಬಂಟ್ವಾಳದ ಬಂಟರ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಅಯೋಜಿಸಿದ್ದ ಜನಸೇವಕ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ರಾಮಪಂಚಾಯತ್ ಸದಸ್ಯರು ಕ್ರಿಯಾಶೀಲತೆಯೊಂದಿಗೆ ಹಳ್ಳಿ ಸರ್ಕಾರದಂತೆ ಕಾರ್ಯನಿರ್ವಹಿಸಬೇಕು. ಇದಕ್ಕೆ ಪೂರಕವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಗ್ರಾಮ ಮಟ್ಟದಲ್ಲಿಯೇ ವಿತರಿಸಲು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಇನ್ನು ಮುಂದಿನ ದಿನಗಳಲ್ಲಿ ಗ್ರಾಪಂ ಸದಸ್ಯರಿಗೆ ನಡೆಯಲಿರುವ ತರಬೇತಿಯನ್ನು ಎಲ್ಲಾ ಸದಸ್ಯರು ಪಡೆದು ಸದಸ್ಯರ ಕಾರ್ಯನನೀತಿಯ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂದು ಹೇಳಿದರು.