ಬೆಂಗಳೂರು: ಮುಂದಿನ ಮೂರು ದಿನಗಳಲ್ಲಿ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಹಾಗೂ ಬೆಂಗಳೂರು, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಅಲ್ಲದೆ ಬೀದರ್, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.