ನವದೆಹಲಿ: ಹೌದು ಮುಂದಿನ ವರ್ಷ ಅಂದರೆ 2021ರ ಜುಲೈ ವೇಳೆಗೆ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಅಂದಾಜು 40ರಿಂದ 50 ಕೋಟಿ ಡೋಸ್‌ ಲಸಿಕೆ ಲಭ್ಯವಿರಲಿದೆ ಎಂದು ಇದನ್ನು ದೇಶದ 25 ಕೋಟಿ ಜನರಿಗೆ ನೀಡಬಹುದಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೊರೋನಾ ಲಸಿಕೆಯನ್ನು ಆದ್ಯತೆಯ ಮೇರೆಗೆ ನೀಡಬೇಕಾಗಿರುವ ಜನರ ಪಟ್ಟಿಯನ್ನು ಅಕ್ಟೋಬರ್ ಅಂತ್ಯದೊಳಗೆ ಸಲ್ಲಿಸಬೇಕು ಎಂದು ರಾಜ್ಯಗಳಿಗೆ ಸೂಚಿಸಿದೆ. ಸಂಡೇ ಸಂವಾದ ಕಾರ್ಯಕ್ರಮದಲ್ಲಿ ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.