ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದಲ್ಲಿ ಒಣ ಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ 34.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಲಬುರ್ಗಿ ಅತಿ ಹೆಚ್ಚು ಅಂದ್ರೆ 42.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಿದೆ.