ಬೆಂಗಳೂರು; ಮುಂದಿನ 24 ಗಂಟೆಯಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೂರು ಜಿಲ್ಲೆಗಳಲ್ಲಿ (ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ) ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದ್ದು, 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ವಾಯುಭಾರ ಕುಸಿತದ ಪರಿಣಾಮ ಮಲೆನಾಡು, ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಿದೆ.