ದುಬೈ: ಐಪಿಎಲ್ 13ನೇ ಆವೃತ್ತಿಯ ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 57 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ ಓವರ್ 4 ವಿಕೆಟ್ ನಷ್ಟಕ್ಕೆ 193 ರನ್ ಪೇರಿಸಿತ್ತು. ಮುಂಬೈ ನೀಡಿದ 194 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ರಾಯಲ್ಸ್ 136 ರನ್ ಗಳಿಗೆ ಆಲೌಟ್ ಆಗಿದ್ದು 57 ರನ್ ಗಳಿಂದ ಸೋಲು ಕಂಡಿದೆ.

ಮುಂಬೈ ಪರ ಡಿ ಕಾಕ್ 23, ರೋಹಿತ್ ಶರ್ಮಾ 35, ಸೂರ್ಯಕುಮಾರ್ ಯಾದವ್ 79, ಹಾರ್ದಿಕ್ ಪಾಂಡ್ಯ 30 ರನ್ ಗಳಿಸಿದ್ದಾರೆ. ರಾಯಲ್ಸ್ ಪರ ಬೌಲಿಂಗ್ ನಲ್ಲಿ ಶ್ರೇಯಸ್ ಗೋಪಾಲ್ 2, ಜೋಫ್ರಾ ಆರ್ಚರ್ ಮತ್ತು ಕಾರ್ತಿಕ್ ತ್ಯಾಗಿ ತಲಾ 1 ವಿಕೆಟ್ ಪಡೆದಿದ್ದಾರೆ.

ರಾಯಲ್ಸ್ ಪರ ಬ್ಯಾಟಿಂಗ್ ನಲ್ಲಿ ಜೋಸ್ ಬಟ್ಲರ್ 70, ಜೋಫ್ರಾ ಆರ್ಚರ್ 24, ಟಾಮ್ ಕುರನ್ 15 ರನ್ ಬಾರಿಸಿದ್ದಾರೆ.