ಮುಂಬೈ: ನಕಲಿ ಸೋಶಿಯಲ್ ಮೀಡಿಯಾ ಫಾಲೋವರ್ಸ್ ಗೆ ಸಂಬಂಧಿಸಿದಂತೆ ನಟಿ ದೀಪಿಕಾ ಹಾಗೂ ಪ್ರಿಯಾಂಕಾ ಚೋಪ್ರಾ ಅವರನ್ನು ಮುಂಬೈ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.

ದೀಪಿಕಾ ಪಡುಕೋಣೆ, ಪ್ರಿಯಾಂಕ್ ಚೋಪ್ರಾ ಸೇರಿದಂತೆ 176 ಹೈ ಪ್ರೊಫೈಲ್ ಸೆಲೆಬ್ರಿಟಿಗಳು ಹಣ ಕೊಟ್ಟು ಫಾಲೋವರ್ಸ್ ಹೆಚ್ಚಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

54 ಕಂಪನಿಗಳು ಈ ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕಿದ್ದು, ತನಿಖೆ ಮುಂದುವೆರೆಸಿದ್ದಾರೆ.