ಬೆಂಗಳೂರು; ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಲಕ್ಷಾಂತರ ನಗದು ದೋಚಿರುವ ಘಟನೆ ರಾಜ್ಯ ರಾಜಧಾನಿಯನ್ನು ಬೆಚ್ಚಿಬೀಳಿಸಿದೆ. ಈ ಘಟನೆಯು ಸೋಮವಾರ ರಾತ್ರಿ ನಡೆದಿದೆ.

ವ್ಯವಹಾರ ನಿಮಿತ್ತ ಬಳ್ಳಾರಿಯ ಮುನೀರ್ ಎಂಬವರು ಬೆಂಗಳೂರಿಗೆ ಆಗಮಿಸಿದ್ದು, ಸೋಮವಾರ ರಾತ್ರಿ ಊರಿಗೆ ತೆರಳಲು ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಮುನೀರ್ ಬಳಿಯಿದ್ದ 16 ಲಕ್ಷದ 60 ಸಾವಿರ ರೂ.ವನ್ನು ಕಿತ್ತು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪೆಪ್ಪರ್ ಸ್ಪ್ರೇ ಮಾಡಿದ್ದರಿಂದ ರಸ್ತೆಯಲ್ಲೇ ಬಿದ್ದಿದ್ದ ಮುನೀರ್ ರನ್ನು ಸ್ಥಳಿಯರು ರಕ್ಷಿಸಿದ್ದಾರೆ. ಈ ಬಗ್ಗೆ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.