ಬೆಂಗಳೂರು: ಹೌದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅನುಮೋದಿಸಿದ ವರ್ಗಾವಣೆಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ಸಚಿವರು ಇನ್ನು ಮುಂದೆ ಮೂಗು ತೂರಿಸುವಂತಿಲ್ಲ!

ಮುಖ್ಯಮಂತ್ರಿ ಅವರ ಸೂಚನೆಯ ಮೇರೆಗೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮಂಗಳವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಅಧಿಕಾರಿಗಳು ವರ್ಗಾವಣೆಗೊಂಡ ಸ್ಥಳಗಳಿಗೆ ನೇರವಾಗಿ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ. ಐಎಎಸ್, ಐಪಿಎಸ್, ಐಎಫ್‌ಎಸ್, ಕೆಎಎಸ್, ಮುಖ್ಯ ಎಂಜಿನಿಯರ್ಗಳು ಹಾಗೂ ಎಲ್ಲ ಇಲಾಖೆಗಳ ಮುಖ್ಯಸ್ಥರ ವರ್ಗಾವಣೆಗೆ ಈ ಸುತ್ತೋಲೆ ಅನ್ವಯವಾಗಲಿದೆ ಎಂದು ಹೇಳಿದೆ.

ಆದ್ರೆ ಇಂತ ಸುತೋಲೆಯಿಂದ ಕೆಂಡಮಂಡಲವಾಗುರುವ ಕೆಲ ಸಚಿವರ ಎದೆಯಲ್ಲಿ ತೌಡು ಕಟ್ಟಿದಂತಾಗಿದೆಯಂತೆ