ಬೆಂಗಳೂರು: ಹಾಸನದ ಕಾರ್ಯಕ್ರಮದಲ್ಲಿ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಜನರಿಗೆ ನೀಡಿದ ಹೇಳಿಕೆಯನ್ನು ಖಂಡಿಸಿ ಇಂದು ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಮುಂದಾಗಿದೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರೋಧ ಪಕ್ಷದ ಉಪನಾಯಕ ಗೋವಿಂದ ಕಾರಜೋಳ, ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌, ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಹಾಗೂ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಅವರು ಮುಖ್ಯಮಂತ್ರಿಗಳ ಹೇಳಿಕೆ ಖಂಡಿಸಿದಲ್ಲದೆ, ಭಾರತೀಯ ದಂಡೆ ಸಂಹಿತೆ 124(ಎ) ಪರಿಚ್ಛೇದದಡಿ ರಾಜದ್ರೋಹವಾಗುತ್ತದೆ ಎಂದು ಹೇಳಿದ್ದಾರೆ ಹಾಗಾಗಿ ಇಂದು ರಾಜ್ಯಪಾಲರಿಗೆ ದೂರು ನೀಡಲಾಗುತ್ತದೆ ಎಂದು ತಿಳಿದುಬಂದಿದೆ.