ಬೆಂಗಳೂರು : ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಇದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಅನಾಹುತ ತಪ್ಪಿದೆ.

ರಾತ್ರಿ ಶ್ರೀರಂಗಪಟ್ಟಣದ ಪೀಹಳ್ಳಿ ಸಮೀಪ ಈ ಅವಘಡ ಸಂಭವಿಸಿದ್ದು, ಸಿಎಂ.ಹೆಚ್.ಡಿ. ಕುಮಾರಸ್ವಾಮಿ ಅವರು ಕಾರಿನಲ್ಲಿದ್ದಾಗ ಬೆಂಕಿ ಕಾಣಿಸಿಕೊಂಡಿತು  ಇದನ್ನು ಗಮನಿಸಿದ ಆಪ್ತ ಸಿಬ್ಬಂದಿ ಸಿಎಂ ಕುಮಾರಸ್ವಾಮಿ ಅವರನ್ನು ಕಾರಿನಿಂದ ಕೆಳಗಿಳಿಸಿದ್ದಾರೆ.

ಸಿಎಂ ಕುಮಾರಸ್ವಾಮಿ ಅವರ ರೇಂಜ್ ರೋವರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸಿಎಂ ಬೇರೆ ಕಾರಿನಲ್ಲಿ ಕೆಆರ್ ಎಸ್ ಗೆ ತೆರಳಿದರು ಎಂದು ತಿಳಿದು ಬಂದಿದೆ.