ಬೆಂಗಳೂರು: ಮುಖ್ಯ ಮಂತ್ರಿ ಕುಮಾರಸ್ವಾಮಿಯವರು 2018ರ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಮೇಲೆ ಹೆಚ್‌ಡಿಕೆ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.!

ಪ್ರಜ್ಞಾವಂತ ನಾಗರಿಕ ಸಮಿತಿ ಅಧ್ಯಕ್ಷ ಆನಂದ್ ಎನ್ನುವವರು ಈ ದೂರು ನೀಡಿದ್ದು, ಅವರು ತಮ್ಮ ದೂರಿನಲ್ಲಿ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣದಿಂದ ಏಕ ಕಾಲಕ್ಕೆ ಹೆಚ್‌.ಡಿ ಕುಮಾರಸ್ವಾಮಿ ಸ್ಪರ್ಧಿಸಿದ್ದರು.

ನಾಮಪತ್ರ ಸಲ್ಲಿಸುವ ವೇಳೆ ಹೆಚ್‌ಡಿಕೆ ಸಲ್ಲಿಸಿದ್ದ ಅಫಿಡೆವಿಟ್‌ನಲ್ಲಿ ಕುಟುಂಬ ಸದಸ್ಯರ ಬಗೆಗಿನ ಮಾಹಿತಿಯನ್ನು ತಿಳಿಸಿಲ್ಲ, ಇದಲ್ಲದೇ 2ನೇ ಪತ್ನಿ ನಟಿ ರಾಧಿಕಾ, ಪುತ್ರಿ ಶರ್ಮಿಕಾ ಹಾಗೂ ಪುತ್ರ ನಿಖಿಲ್‌ ಬಗ್ಗೆ ಯಾವುದೇ ಮಾಹಿತಿ ಉಲ್ಲೇಖಿಸಿಲ್ಲ. ಈ ಮೂಲಕ ಹೆಚ್‌ಡಿಕೆ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಅಂತ ದೂರು ನೀಡಲಾಗಿದೆ.

ಆನಂದ್‌ ಸಲ್ಲಿಸಿದ ಅರ್ಜಿಯನ್ನ ವಿಶೇಷ ನ್ಯಾಯಾಲಯ ವಿಚಾರಣೆಗೆ ಮಾನ್ಯ ಮಾಡಿದ್ದು ಸದ್ಯದಲ್ಲೇ ಈ ಬಗ್ಗೆ ವಿಚಾರಣೆ ಕೈಗೆತ್ತುಕೊಳ್ಳಲಿದೆ ಎಂಬುದು ಸುದ್ದಿ.!