ಬೆಂಗಳೂರು : ಮುಖ್ಯ ಮಂತ್ರಿ  ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರೂ ಕೂಡ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಅವರ ವರದಿ ಬಂದಿದ್ದು, ವರದಿಯಲ್ಲಿ ಸಿಎಂ ಬಿಎಸ್ ವೈ ಪುತ್ರಿ ಪದ್ಮಾವತಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸ್ವಯಂ ಕ್ವಾರಂಟೈನ್ ಗೆ ಒಳಲಾಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇಂದು ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ವರದಿಯಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ