ಚಿತ್ರದುರ್ಗ: ಮುಖ್ಯ ಮಂತ್ರಿ ಯಡಿಯೂರಪ್ಪರು ಕೊರೋನಾ ಸೋಂಕಿನಿಂದ ಶೀಘ್ರ ಗುಣಮುಖರಾಗಿ ಹೊರ ಬರಲಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು  ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯಲ್ಲಿ ಹರಕೆ ಹೊತ್ತು ಪ್ರಾರ್ಥನೆ ಮಾಡಿಕೊಂಡಿದ್ದಾರೆ.!

ನಾಯಕನಹಟ್ಟಿಯಲ್ಲಿ ಮಾತಾಡಿದ ಸಚಿವ ಶ್ರೀರಾಮುಲು, ಸಿಎಂ 24 ಗಂಟೆ ನಿರಂತರವಾಗಿ ಕೊರೊನಾ ನಿಯಂತ್ರಿಸುವ ಕೆಲಸ ಮಾಡಿದ್ದಾರೆ.

ಬೆಂಗಳೂರು ಸೇರಿ ರಾಜ್ಯದ ಬೇರೆ ಬೇರೆ ಕಡೆ ಕೋವಿಡ್ ಜಾಗೃತಿ ಮೂಡಿಸಿದ್ದರು. ಆದಷ್ಟು ಬೇಗ ಅವರು ಗುಣಮುಖರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ರಾಜ್ಯದಲ್ಲಿ ಕೊರೊನಾ ಪರೀಕ್ಷೆಯನ್ನು ಹೆಚ್ಚು ಮಾಡಬೇಕಿದೆ ಎಂದರು.