ಚಿತ್ರದುರ್ಗ: ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ಉಗ್ರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಜೈಲ್ ಭರೋ ಪ್ರತಿಭಟನೆ ನಡೆಸಿದರು.

ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಕಾರ್ಯರ್ಕರು ಆಗ್ರಹಿಸಿದರು. ನಾನು ಆರ್ ಎಸ್ ಎಸ್, ನಾನು ಬಿಜೆಪಿ ನಮ್ಮನ್ನು ಬಂಧಿಸಿ ಎಂದು ಘೋಷಣೆ ಕೂಗಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆರ್ ಎಸ್,ಎಸ್ , ಬಜರಂಗದಳ ಮತ್ತು ಬಿಜೆಪಿಯವರೇ ಉಗ್ರಗಾಮಿಗಳೇ ಎಂದು ಇತ್ತೀಚೆಗೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಹಿಂದೂಪರ ಸಂಘಟನೆಯ ಮುಖಂಡರು, ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರ ಹೇಳಿಕೆಯಿಂದ ಹೊತ್ತಿಕೊಂಡಿದ್ದ ಬೆಂಕಿಗೆ ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಇನ್ನು ಸ್ವಲ್ಪ ಸೇರಿಸಿ ಉರಿಯುವ ಬೆಂಕಿಗೆ ತುಪ್ಪ ಸುರಿದರು. ಇದರಿಂದ ರಾಜ್ಯದ್ಯಾಂತ ಬಿಜೆಪಿ ಕಾರ್ಯಕರ್ತರು ಜೈಲ್ ಭರೋ ಚಳವಳಿ ನಡೆಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಬಳಿಯ ಕಾಂಗ್ರೆಸ್ ಕಚೇರಿ ಮುಂಭಾಗ ಸೇರಿದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಭಯೋತ್ಪಾದಕರು ಯಾರು? ಸಿದ್ಧರಾಮಯ್ಯನವರೇ ಉತ್ತರಿಸಿ ಎಂಬ ಪೋಸ್ಟರ್ ನೊಂದಿಗೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ನಾನು ಆರ್ ಎಸ್ ಎಸ್ , ನಾನು ಬಿಜೆಪಿ ನಮ್ಮನ್ನು ಬಂಧಿಸಿ ಎಂದು ಘೋಷಣೆ ಕೂಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯಸರಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ತೀವ್ರಗೊಳುತ್ತಿದ್ದಂತೆ ಮದ್ಯಪ್ರವೇಶಿಸಿದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದರು.

ನಗರದಲ್ಲಿರುವ ಬ್ಯಾರಿಕೇಡ್ ತಳ್ಳಿ ಕಾಂಗ್ರೆಸ್ ಕಚೇರಿಯತ್ತ ನುಗ್ಗಿ ಪ್ರತಿಭಟನೆ ನಡೆಸಿದರು. ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಬಳಿಕ ವಾದ-ವಿವಾದ ತಾರಕಕ್ಕೇರುತ್ತಿದ್ದಂತೆಯೇ ಬಿಜೆಪಿಯ ಐವತ್ತುಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದರು.

ಸಿದ್ದರಾಮಯ್ಯರವರ ಹೇಳಿಕೆಗೆ ಹಿಂದೂಪರ ಸಂಘಟನೆಯ ಮುಖಂಡರು, ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನಡೆಸಿ ಕಾಂಗ್ರೇಸ್ ಕಛೇರಿಯನ್ನು ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ವಿವಿಧ ಘಟಕಗಳ ಪುರುಷ ಮತ್ತು ಮಹಿಳಾ ಪದಾಧಿಕಾರಿಗಳನ್ನು ಪೋಲಿಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ವಹಿಸಿದ್ದರು, ಇದರಲ್ಲಿ ಲೀಲಾಧರ್ ಠಾಕೂರ್, ಸಿದ್ದಾಪುರದ ಸುರೇಶ್, ಮಾಜಿ ಅಧ್ಯಕ್ಷ ನರೇಂದ್ರನಾಥ್ ಜಿ.ಎಂ.ಸುರೇಶ್, ಶ್ರೀಮತಿ ರತ್ನಮ್ಮ, ಶಂಬು ಶಿವಪ್ರಕಾಶ್ ದಗ್ಗೆ, ಸಂಪತ್ತು ನಗರಸಭೆ ಸದಸ್ಯ ಭೀಮರಾಜ್, ಗೌರಣ್ಣ, ಶಿವಣ್ಣಚಾರ್, ರವಿ, ತಿಪ್ಪೇಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.