ಚಿತ್ರದುರ್ಗ : ಕಳೆದ ಎರಡುವಾರಗಳ ಹಿಂದೆ ಮುರುಘಾಶರಣರಿಗೆ ಸ್ವಲ್ಪ ಆನಾರೋಗ್ಯ ಉಂಟಾಗಿ ಬೆಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ದಿನಗಳಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಶರಣರ ಆರೋಗ್ಯವನ್ನು ವಿಚಾರಿಸಲು ಗದುಗಿನ ಶ್ರೀ ತೋಂಟದಾರ್ಯ ಮಠದ ಜಗದ್ಗುರು ಡಾ. ಸಿದ್ಧಲಿಂಗ ಮಹಾಸ್ವಾಮಿಗಳು ಶ್ರೀಮುರುಘಾಮಠಕ್ಕೆ ಭೇಟಿ ನೀಡಿ ಡಾ. ಶಿವಮೂರ್ತಿ ಮುರುಘಾ ಶರಣರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಹಿರೇಮಾಗಡಿ ಶ್ರೀ ಮುರುಘಾಮಠದ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಮಹಾಸ್ವಾಮಿಗಳು, ಬ್ಯಾಡಗಿ ಮುಪ್ಪಿನಸ್ವಾಮಿ ವಿರಕ್ತಮಠದ ಚರಮೂರ್ತಿಗಳಾದ ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮಿಗಳು, ತಿಳವಳ್ಳಿ ಕಲ್ಮಠದ ಚರಮೂರ್ತಿಗಳಾದ ಶ್ರೀ ಬಸವ ನಿರಂಜನ ಸ್ವಾಮಿಗಳು ಜೊತೆಗಿದ್ದರು.