ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ಮೂರು ಕೃಷಿ ಕಾನೂನುಗಳಿಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು , ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಿದೆ.

ಸುಪ್ರೀಂಕೋರ್ಟ್‍ನ ಮುಖ್ಯನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ವಿ.ರಾಮ ಸುಬ್ರಮಣಿಯಣ್ ಅವರನ್ನು ಒಳಗೊಂಡ ವಿಭಾಗೀಯ ಪೀಠ, ರೈತರ ಪ್ರತಿಭಟನೆ ಮತ್ತು ಕೃಷಿ ಕಾನೂನುಗಳ ಕುರಿತಂತೆ ಸಲ್ಲಿಸಲಾಗಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿತ್ತು.

ಸುದೀರ್ಘ ವಿಚಾರಣೆಯ ಬಳಿಕ ಇಂದು ತಮ್ಮ ತೀರ್ಪನ್ನು ಪ್ರಕಟಿಸಿದ ನ್ಯಾಯಮೂರ್ತಿಗಳು ಕಾನೂನುಗಳಿಗೆ ತಡೆ ನೀಡಿದ್ದಾರೆ.