ಬೆಂಗಳೂರು: ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಯು ಹಾಸನ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿಗಳು ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪದ ಆಧಾರದ ಮೇಲೆ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗಿದೆ. ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ ವೈ.ಎಸ್.​ ಪಾಟೀಲ್, ಹಾಸನದಿಂದ ಅಕ್ರಂ ಪಾಷಾ ಮತ್ತು ಬೆಳಗಾವಿಯ ಜಿಲ್ಲಾಧಿಕಾರಿಯಾಗಿದ್ದ ಎಸ್​.ಬಿ. ಬೊಮ್ಮನಹಳ್ಳಿ ಅವರನ್ನು ವರ್ಗಾವಣೆ ಮಾಡಲಾಗಿದೆ.