ಮೈಸೂರು: ಸಂಸದ ಪ್ರತಾಪ್ ಸಿಂಹ ಎಲ್ಲಿದ್ದ? ಮೈಸೂರಿಗೆ ಅವನ ಕೊಡುಗೆ ಏನು ಎಂದು ಸಿದ್ದರಾಮಯ್ಯ ವಾಗ್ದಾಳಿಮಾಡಿದ್ದಾರೆ.
ನಾನು, ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿಪಡಿಸುವಾಗ ಸಂಸದ ಪ್ರತಾಪ್ ಸಿಂಹ ಎಲ್ಲಿದ್ದ.  ಮೈಸೂರಿಗೆ ಅವನ ಕೊಡುಗೆ ಏನು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಏಕವಚನದಲ್ಲಿಯೇ ಮಾತನಾಡಿದರು.

ನಾವು ಮಾಡಿದ ಕೆಲಸವನ್ನು ನಾನು ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾನೆ. ನಾನು ಆತನ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಅಲ್ಲದೇ ಬಿಜೆಪಿಯ ರಾಜ್ಯ ಸಂಸದರು ಯಾವುದೇ ಕೆಲಸವನ್ನು ಮಾಡಿಲ್ಲ ಎಂದು ಹೇಳಿದರು.