ಮೈಸೂರು:  ಜಿಲ್ಲಾ ಪಂಚಾಯಿತಿ‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯು ಪ್ಯಾರಾ ಮೆಡಿಕಲ್ ಸಿಬ್ಬಂದಿಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ.

ಒಟ್ಟು 123 ಹುದ್ದೆಗಳು ಖಾಲಿ ಇದ್ದು, ನೇಮಕಾತಿಯು ಗುತ್ತಿಗೆ ಆಧಾರಿತವಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 27ರಂದು ಬೆಳಿಗ್ಗೆ 10-00 ಗಂಟೆಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಮೈಸೂರು ಇಲ್ಲಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.