ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ. ದಸರಾದಲ್ಲಿ ಜಂಬೂ ಸವಾರಿ ಇರಲ್ಲ, ಕೇವಲ ಅರಮನೆ ಒಳಗಡೆ ಮಾತ್ರ ಜಂಬೂ ಸವಾರಿ ಇರಲಿದೆ ಎಂದು ಸಚಿವ ಸಿ.ಟಿ. ರವಿ ಹೇಳಿದರು.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು,  ಈ ಬಾರಿ ಮಕ್ಕಳ ದಸರಾ, ಮಹಿಳಾ ದಸರಾ , ಯುವ ದಸರಾ, ಕುಸ್ತಿ ಪಂದ್ಯಾವಳಿ, ಆಹಾರ ಮೇಳ , ಪಂಜಿನ ಕವಾಯತು ಕೂಡು ಇರುವುದಿಲ್ಲ ಎಂದರು.